ವಿಷಯಕ್ಕೆ ಹೋಗಿ

ವ್ಯಂಗ್ಯಚಿತ್ರಾಚಾರ್ಯ !


ಇತ್ತೀಚಿನ ದಿನಗಳಲ್ಲಿ ದೇಶದ ಮುಂಚೂಣಿ ವ್ಯಂಗ್ಯಚಿತ್ರಕಾರರ ಸಾಲಿಗೆ ಕುಂದಾಪುರದ ಸತೀಶ್ ಆಚಾರ್ಯ ಸಹ ಸೇರ್ಪಡೆಯಾಗಿದ್ದಾರೆ. ಇವರ ವ್ಯಂಗ್ಯಚಿತ್ರಗಳ ಸಂಗ್ರಹದ ಮೊದಲ ಪುಸ್ತಕ 'ಮೈನ್, ಹಮ್ & ಆಪ್' ಇತ್ತೀಚಿಗೆ ಬಿಡುಗಡೆಯಾಗಿದೆ. 

ನಿನ್ನೆ ತಾನೆ ಪುಸ್ತಕವನ್ನು ತರಿಸಿಕೊಂಡೆ. ಇದೀಗ ಎದುರಾಗಿರುವ ಲೋಕಸಭೆಯ ಚುನಾವಣೆಯ ಹೊಸ್ತಿಲಲ್ಲಿರುವುದರಿಂದ ಚುನಾವಣೆ ಹಾಗೂ ರಾಜಕೀಯಕ್ಕೆ ಸಂಬಂಧಿಸಿದ ವಸ್ತುಗಳೇ ಇಲ್ಲಿನ ವ್ಯಂಗ್ಯಚಿತ್ರಗಳಲ್ಲಿ ಇರುವುದು. 

ಡೆಮಿ ಅಳತೆಯ ಪುಸ್ತಕವನ್ನು ಅತ್ಯುತ್ತಮವಾಗಿ ಬಣ್ಣದಲ್ಲಿ ಆರ್ಟ್‌ ಪೇಪರ‍್ ಬಳಸಿ ಕುಂದಾಪುರದಲ್ಲಿಯೇ ಮುದ್ರಿಸಲಾಗಿದೆ ಅನ್ನುವುದು ವಿಶೇಷ. ಹಾಗೆಯೆ ಈ ಪುಸ್ತಕವನ್ನು ಆನ್‌ಲೈನ್‌ನಲ್ಲಿ ಕೊಂಡರೆ  ಜೊತೆಗೆ ಆಚಾರ್ಯರು ಬಿಡಿಸಿದ ವ್ಯಂಗ್ಯಚಿತ್ರದ ಅಸಲಿ ಪ್ರತಿಯೊಂದು ಸಹ ನಮಗೆ ಸಿಗಲಿದೆ.

 ಕುಂದಾಪುರದಲ್ಲಿ ಹುಟ್ಟಿ ಬೆಳೆದ ಸತೀಶ್ ಅವರು ಓದಿದ್ದು ಬಿ.ಕಾಂ, ಹಾಗೂ ಎಂಬಿಎ. ಕಾಲೇಜು ದಿನಗಳಲ್ಲೇ ಕನ್ನಡದ ಪತ್ರಿಕೆಗಳಿಗೆ ವ್ಯಂಗ್ಯಚಿತ್ರಗಳನ್ನು ಬರೆಯಲಾರಂಬಿಸಿದರು. ನಂತರ ವ್ಯಂಗ್ಯಚಿತ್ರದ ಗೀಳು ಹತ್ತಿಸಿಕೊಂಡು ಮುಂಬೈಗೆ ತೆರಳಿ ಅಲ್ಲಿ ಹತ್ತಾರು ವರ್ಷಗಳ ಕಾಲ ಕಂಡ ಕಂಡ ಪತ್ರಿಕೆಗಳಿಗೆ ಗೆರೆ ಗೀಚಿದ ನಂತರ ಮಿಡ್-ಡೇ ಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿ ಉದ್ಯೋಗ ದೊರೆಯಿತು. ಕಳೆದ ಒಂಬತ್ತು ವರ್ಷಗಳಿಂದಲೂ ಆ ಪತ್ರಿಕೆಗೆ ದಿನನಿತ್ಯ ವ್ಯಂಗ್ಯಚಿತ್ರಗಳನ್ನು ಬರೆಯುತ್ತಿದ್ದಾರೆ. ಹಾಗೆಯೆ ಹೆಸರಾಂತ ಜಾಲತಾಣಗಳಿಗೂ, ಅನೇಕ ಕನ್ನಡ ಪತ್ರಿಕೆಗಳಿಗೂ ವ್ಯಂಗ್ಯಚಿತ್ರ ಬರೆಯುತ್ತಿದ್ದಾರೆ.

ರಾಜಕೀಯ ವ್ಯಕ್ತಿಗಳೇ ಇವರ ಪ್ರಮುಖ ವಿಷಯಗಳು. ಇವರ ಗೆರೆಗಳು ಹೆಚ್ಚು ಸ್ಫುಟವಾಗಿದ್ದು ವ್ಯಕ್ತಿಗಳ ಚಿತ್ರಣ ಸ್ಪಷ್ಟವಾಗಿರುತ್ತದೆ. ಹಾಗೂ ವಾಸ್ತವಕ್ಕೆ ಕನ್ನಡಿ ಹಿಡಿವ ಇವರ ಚಿತ್ರಗಳ ಹಿಂದೆ ಕೇವಲ ಹಾಸ್ಯವಷ್ಟೇ ಇರದೇ ರಾಜಕಾರಣಿಗಳ ಗೋಸುಂಬೆತನ, ಮೋಸ, ವಂಚನೆ, ಮೂರ್ಖತನಗಳು ಅನಾವರಣಗೊಂಡಿರುತ್ತವೆ. 

ವ್ಯಂಗ್ಯಚಿತ್ರಗಳಿಗೆ ಭಾಷೆ ಬೇಡವಾಗಿದ್ದರೂ 'ಮೈನ್, ಹಮ್ & ಆಪ್' ಪುಸ್ತಕದ ಚಿತ್ರಗಳ ಸಂಭಾಷಣೆ, ಅಡಿ ಬರಹಗಳು ಆಂಗ್ಲದಲ್ಲಿವೆ. ಕನ್ನಡದಲ್ಲಿ ಈ ರೀತಿಯ ಪುಸ್ತಕಗಳು ಕಡಿಮೆಯೇ. ಆದುದರಿಂದ ಸತೀಶ್ ಅವರು ಆದಷ್ಟು ಬೇಗನೆ ಕನ್ನಡದಲ್ಲೂ ತಮ್ಮ ವ್ಯಂಗ್ಯಚಿತ್ರಗಳ ಪುಸ್ತಕವನ್ನು ಪ್ರಕಟಿಸಲಿ ಎಂದು ಆಶಿಸೋಣ. 
ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು.

* ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ.

* ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ.

* ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್.

* ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ.

* ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ.

* ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ.

* ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ.

* ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ.

* ಶಿಕ್ಷಣವೇ ಜೀವನದ ಬೆಳಕು - ಗೊರೂರು

* ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್.

* ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ.

* ವಿದ್ಯೆ ಗುರುಗಳ ಗುರು - ಭ್ರತೃ ಹರಿ.

* ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ಕೀರ್ತಿ ಕೈಗೂಡುತ್ತದೆ …

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು.

ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ.

ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆತ್ಮ…