ವಿಷಯಕ್ಕೆ ಹೋಗಿ

ಶಿಕ್ಷಣದ ಬಗೆಗಿನ ನುಡಿಮುತ್ತುಗಳು


* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು.

* ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ.

* ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ.

* ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್.

* ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ.

* ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ.

* ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ.

* ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ.

* ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ.

* ಶಿಕ್ಷಣವೇ ಜೀವನದ ಬೆಳಕು - ಗೊರೂರು

* ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್.

* ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ.

* ವಿದ್ಯೆ ಗುರುಗಳ ಗುರು - ಭ್ರತೃ ಹರಿ.

* ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ಕೀರ್ತಿ ಕೈಗೂಡುತ್ತದೆ - ನುಡಿಮುತ್ತುಗಳು.

* ಶಿಕ್ಷಣವೆಂದರೆ, ಮನಸ್ಸು, ದೇಹ, ಬುದ್ಧಿಗಳೊಂದಿಗೆ ದೊರೆಯುವ ಸಂಸ್ಕಾರ - ಹರ್ಡೀಕರ‍್ ಮಂಜಪ್ಪ.

* ಮನುಷ್ಯನ ವ್ಯಕ್ತಿತ್ವ ಶಿಕ್ಷಣದಿಂದ ಬಯಲಿಗೆ ಬರುತ್ತದೆ - ವಿವೇಕಾನಂದ.

* ವಿದ್ಯಾಭ್ಯಾಸದಿಂದ ಪ್ರಭುತ್ವ ಬೆಳೆಯದು - ಜಾನ್ ಡ್ಯೂಯಿ.

* ಶಿಕ್ಷಣಕ್ಕಿಂತಲೂ ಮನುಷ್ಯರಿಗೆ ಶೀಲ ಚರಿತ್ರೆಗಳು ಹೆಚ್ಚು ಅವಶ್ಯಕ - ಸ್ಪೆನ್ಸರ್.

* ಮನುಷ್ಯನು ಕಲಿಯಲು ಬಯಸುವುದಾದರೆ ಅವನ ಪ್ರತಿಯೊಂದು ತಪ್ಪು ಅವನಿಗೆ ಶಿಕ್ಷಣ ಕೊಡುತ್ತದೆ - ಚಾರ್ಲ್ಸ್ ಡೆಕ್ಕನ್.

* ಅಭಿರುಚಿಯನ್ನು ಹುಟ್ಟಿಸುವುದು ಶಿಕ್ಷಣದ ಉದ್ದೇಶವೇ ಹೊರತು, ಒಬ್ಬರು ಕಲಿತದ್ದನ್ನು ಮತ್ತೊಬ್ಬರಿಗೆ ಹೇಳುವುದಲ್ಲ -  ಗಯಟೆ.

* ಶಾಲಾ-ಕಾಲೇಜುಗಳಲ್ಲಿ ಕಲಿತದ್ದು ನಿಜವಾದ ಶಿಕ್ಷಣವಲ್ಲ.  ಅದು ಶಿಕ್ಷಣಕ್ಕೆ ಸಾಧನವಷ್ಟೆ - ಎಮರ್ಸನ್.

* ಮನುಷ್ಯರಲ್ಲಿ ಪ್ರೇಮವನ್ನು ಮೂಡಿಸುವ ಸರಳ ಜೀವನನ್ನು ಕಲಿಸುವ ವಿದ್ಯೆಯೇ ಶ್ರೇಷ್ಠವಾದದ್ದು - ಟಾಲ್ಸ್ಟಾಯ್.

* ಮನುಷ್ಯನಿಗೆ ಯಾವುದು ಗೊತ್ತಿಲ್ಲವೋ ಅದನ್ನು ತಿಳಿಸುವುದು ವಿದ್ಯಾಭ್ಯಾಸದ ಗುರಿಯಲ್ಲ.  ಹೇಗೆ ವರ್ತಿಸಬೇಕೆಂದು ತಿಳಿಸುವುದೇ ವಿದ್ಯಾಭ್ಯಾಸದ ಗುರಿ - ಜಾನ್ ರಸ್ಕಿನ್.

* ಪ್ರತಿಯೊಬ್ಬ ವ್ಯಕ್ತಿಯು ಎರಡು ರೀತಿಯ ಶಿಕ್ಷಣ ಹೊಂದುತ್ತಾನೆ.  ಒಂದು ಇತರರು ಅವನಿಗೆ ನೀಡುವುದು.  ಇನ್ನೊಂದು ಸ್ವಂತ ಅವನು ಕಲಿಯುವುದು - ನುಡಿಮುತ್ತು.

* ವಿದ್ಯೆಯೊಂದಿಗೆ ಆದರ್ಶ ಗುಣಗಳು ನಿನ್ನಲ್ಲಿ ಬರದಿದರೆ ನೀನು ಓದಿದ್ದು ವ್ಯರ್ಥ - ಪ್ರೇಮಚಂದ.

* ಮನೆಯೇ ಮೊದಲ ಪಾಠಶಾಲೆ - ಗಾದೆ.

* ವಿದ್ಯಾಭ್ಯಾಸ ಯಾವ ದಿಕ್ಕಿನಲ್ಲಿ ಮನುಷ್ಯನನ್ನು ನಡೆಸುವುದೋ ಅದೇ ಅವನ ಭವಿಷ್ಯವನ್ನು ನಿರ್ಧರಿಸುವುದು - ಪ್ಲೇಟೋ.

* ಶಿಕ್ಷಣವು ಅನುಭವಗಳ ಪೂರ್ವ ವ್ಯವಸ್ಥೆ ವಿಧಾನ - ಜಾನ್ ಡ್ಯೂಯಿ.

* ಶಿಕ್ಷಣದ ಮುಖ್ಯ ಕೆಲಸವೆಂದರೆ ನಮ್ಮ ಬದುಕನ್ನು ಅರ್ಥಪೂರ್ಣವಾಗುವಂತೆ ಸಹಕರಿಸುವುದು - ಸ್ಪೆನ್ಸರ್.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು.

ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ.

ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆತ್ಮ…