ವಿಷಯಕ್ಕೆ ಹೋಗಿ

ಕೊನೆಗೂ ಜೈಲು ಸೇರಿದ ಮಹಾಭ್ರಷ್ಟ !

ಕರ್ನಾಟಕ ಕಂಡ ಮಹಾ ಭ್ರಷ್ಟ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೊನೆಗೂ ಜೈಲು ಮುದ್ದೆ ಮುರಿಯಲು ಹೋಗುವ ಮೂಲಕ ರಾಜ್ಯಕ್ಕೆ ಆಶಾಕಿರಣ ಮೂಡಿಸಿದ್ದಾರೆ.

ಇವರ ರೈತಪರ ಹೋರಾಟವನ್ನು ನೋಡಿ ಮೆಚ್ಚಿದ ಜನತೆ ಕುಮಾರಸ್ವಾಮಿಯನ್ನು ಮೂಲೆಗೆಸೆದು ಮುಖ್ಯಮಂತ್ರಿ ಗಾದಿ ಮೇಲೆ ಕೂರಿಸಿದ್ದೇನೋ ಸರಿ. ಆದರೆ ಅದರ ನಂತರ ಈ ಮನುಷ್ಯ ಬದಲಾದ ಪರಿ ನೋಡಿದರೆ ಊಸರವಳ್ಳಿಯೂ ನಾಚಿಕೊಳ್ಳುತ್ತೆ. ಅಂತಹ ಹೋರಾಟದ ಹಿನ್ನೆಲೆಯ ವ್ಯಕ್ತಿ ಇವರೇನಾ ? RSS ನಿಂದ ಬಂದವರು ಇವರೇನಾ ಅನ್ನಿಸಿದ್ದು ಸುಳ್ಳಲ್ಲ. ಅಧಿಕಾರಕ್ಕೆ ಬರುತ್ತಿರುವಂತೆಯೇ ಶೋಭಾಳನ್ನು ಬಗಲಲ್ಲಿಟ್ಟುಕೊಂಡು ಮಾಡಬಾರದ ಅನಾಚಾರಕ್ಕಿಳಿದ ಯಡ್ಡಿ ಫಕತ್ತು ನುಂಗಲು ಕುಳಿತುಬಿಟ್ಟರು. ಅಭಿವೃದ್ಧಿಯ ಹೆಸರಲ್ಲಿ ತಾವು ಮತ್ತು ತಮ್ಮ ಕುಟುಂಬವನ್ನು ಅಭಿವೃದ್ದಿ ಮಾಡಿಕೊಂಡರು. ಇದಕ್ಕೆ ತಮ್ಮ ಜಾತಿಯನ್ನು ಕೋಟೆಯನ್ನಾಗಿ ಬಳಸಿಕೊಂಡರು. ಇದಕ್ಕಾಗಿ ಐನಾತಿ ಸ್ವಾಮೀಜಿಗಳಿಗೆ ಕೋಟ್ಯಾಂತರ ರೂಪಾಯಿ ಬಿಟ್ಟಿ ಹಣ ನೀಡಿ ಜಾತಿಯ ಜನರನ್ನು ಏಮಾರಿಸಲು ಉಪಯೋಗಿಸಿಕೊಂಡರು. ಇಂತಹ ಹಲಾಲುಖೋರ ಯಡಿಯೂರಪ್ಪ ಕೊನೆಗೂ ಜೈಲೂಟ ಉಣ್ಣಲು ಕಂಬಿ ಹಿಂದೆ ಚಕ್ಕಳಮಕ್ಕಳ ಹಾಕಿರುವುದು ಉಳಿದ ರಾಜಕಾರಣಿಗಳಿಗೆ, ಮುಖ್ಯಮಂತ್ರಿಗಳಿಗೆ ಪಾಠವಾಗಲಿ. ನ್ಯಾಯಾಲಯಕ್ಕೆ ಒಂದು ಧನ್ಯವಾದಗಳು.

ಇಂತಹ ನೀತಿಗೆಟ್ಟ ಜಾತೀವಾದಿ ಹಲಾಲುಟೋಪಿ ರಾಜಕಾರಣಿ ಹಿಂದೆ ಬಂದಿರಲಿಲ್ಲ, ಮುಂದೆಯೂ ಬರುವುದು ಬೇಡ. ಹಾಗೆಯೇ ಕೇವಲ ಜಾತಿ ಕಾರಣಕ್ಕೆ ಭ್ರಷ್ಟರನ್ನೂ ಬೆಂಬಲಿಸುವ ಮಠಾಧೀಶರಿಗೆ ಮತ್ತು ಜನತೆಗೆ ಇದೊಂದು ಪಾಠವಾಗಲಿ.
ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು.

* ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ.

* ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ.

* ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್.

* ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ.

* ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ.

* ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ.

* ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ.

* ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ.

* ಶಿಕ್ಷಣವೇ ಜೀವನದ ಬೆಳಕು - ಗೊರೂರು

* ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್.

* ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ.

* ವಿದ್ಯೆ ಗುರುಗಳ ಗುರು - ಭ್ರತೃ ಹರಿ.

* ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ಕೀರ್ತಿ ಕೈಗೂಡುತ್ತದೆ …

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು.

ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ.

ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆತ್ಮ…