ವಿಷಯಕ್ಕೆ ಹೋಗಿ

ಕನ್ನಡಪ್ರಭದವ್ರು ಹೇಳ್ತಾರೆ... ವೀಕೆಂಡ್‌ಗೆ ತಮಿಳು, ತೆಲುಗು, ಇಂಗ್ಲಿಷ್ ಸಿನೆಮಾ ನೋಡಿ !!!


ಇಂದಿನ ಕನ್ನಡಪ್ರಭದ ನಾಲ್ಕನೇ ಪುಟವನ್ನು ನೋಡಿ ಅಚ್ಚರಿಯಾಯ್ತು. ಕಾರಣ, ಒಂದು ಕಾಲದಲ್ಲಿ ಕನ್ನಡದ ಕಾಳಜಿಯಲ್ಲಿ ಮುನ್ನೆಲೆಯಲ್ಲಿ ಇದ್ದ ಕನ್ನಡಪ್ರಭ ಯಾವ ಮಟ್ಟಕ್ಕೆ ಇಳಿಯಿತು ಎನ್ನಿಸಿತು. 
ನಾಲ್ಕನೇ ಪುಟದಲ್ಲಿ "ವೀಕೆಂಡ್‌ ಗೈಡ್" ಎನ್ನುವ ಆಂಗ್ಲ ತಲೆಬರಹದೊಂದಿಗೆ ಯಾವನೋ ತಲೆ ಕೆಟ್ಟ ಉಪ ಸಂಪಾದಕನೊಬ್ಬ ನೀಡಿರುವ ಮಾಹಿತಿ ಈ ಪತ್ರಿಕೆಯನ್ನು ಕ್ಷಮಿಸುವಂತಿಲ್ಲ. ಇದರಲ್ಲಿ ವೀಕೆಂಡ್ ಆಚರಿಸಲು ಕೆಲವೊಂದು ಮಾಹಿತಿ ನೀಡಿದ್ದಾರೆ. ಅವುಗಳಲ್ಲಿ "ಚಿತ್ರದರ್ಶಿನಿ" ಎಂಬ ವಿಭಾಗದಲ್ಲಿ ತೆಲುಗು, ತಮಿಳು ಹಾಗೂ ಇಂಗ್ಲಿಷ್‌ನ ಕೆಲವೊಂದು ಚಿತ್ರಗಳ ವಿವರದೊಂದಿಗೆ ಅವು ಯಾವ ಚಿತ್ರಮಂದಿರಗಳಲ್ಲಿ ಪ್ರದರ್ಶಿತವಾಗುತ್ತಿವೆ ಎಂಬ ಮಾಹಿತಿಯೂ ಇದೆ. ಆದರೆ ಹುಡುಕಿದರೆ ಕನ್ನಡದ ಯಾವುದೇ ಚಿತ್ರದ ಮಾಹಿತಿ ಇಲ್ಲ! ಸಂಗೊಳ್ಳಿ ರಾಯಣ್ಣ, ಎದೆಗಾರಿಕೆ ಮುಂತಾದ ಅನೇಕ ಉತ್ತಮ ಕನ್ನಡ ಚಿತ್ರಗಳು ನಗರದಲ್ಲಿ ಪ್ರದರ್ಶಿತವಾಗುತ್ತಿರುವಾಗ ಕನ್ನಡವನ್ನುಳಿದು ಬೇರೆ ಭಾಷೆಯ ಚಿತ್ರಗಳಿಗೆ ಕನ್ನಡಿಗರನ್ನು ಕಳಿಸುವ ಅಜ್ಞಾನ ಬಹುಶಃ ಕನ್ನಡಪ್ರಭದವರಿಗೆ ಮಾತ್ರ ಇರಬಹುದೇನೋ. ಇಂದು ಆಂಗ್ಲ ಪತ್ರಿಕೆಗಳೂ ಸಹ ಉತ್ತಮ ಕನ್ನಡ ಚಿತ್ರಗಳು ಬಂದಾಗ ಅವುಗಳ ಬಗ್ಗೆ ಉತ್ತಮವಾಗಿ ಲೇಖನ ಬರೆದು ಕನ್ನಡಕ್ಕೆ ಮನ್ನಣೆ ನೀಡುತ್ತಿರುವಾಗ ಕನ್ನಡದ್ದೇ ಹೆಸರಿನ ಈ ಪತ್ರಿಕೆ ಭಟ್ಟರ ಪಡೆಯೊಂದಿಗೆ ಕುಲಗೆಟ್ಟು ಹೋಗುತ್ತಿರುವುದಕ್ಕೆ ನಾಚಿಕೆಯಾಗುತ್ತಿದೆ.
ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು.

* ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ.

* ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ.

* ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್.

* ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ.

* ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ.

* ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ.

* ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ.

* ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ.

* ಶಿಕ್ಷಣವೇ ಜೀವನದ ಬೆಳಕು - ಗೊರೂರು

* ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್.

* ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ.

* ವಿದ್ಯೆ ಗುರುಗಳ ಗುರು - ಭ್ರತೃ ಹರಿ.

* ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ಕೀರ್ತಿ ಕೈಗೂಡುತ್ತದೆ …

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು.

ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ.

ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆತ್ಮ…