ವಿಷಯಕ್ಕೆ ಹೋಗಿ

ಸಾಹಿತಿಗಳಿಗೂ ರಾಜಕೀಯ ಯೋ(ರೋ)ಗ!ಏನೂ ಮಾಡಲು ಕೆಲಸವಿಲ್ಲದ ಬಡಗಿ ಮತ್ತೇನೋ ಮಾಡಿದ್ದನಂತೆ, ಹಾಗೇ ಆಗಿದೆ ನಮ್ಮ ಹಿರಿಯ ಸಾಹಿತಿ 'ಚಂಪಾ' ಎಂದು ನಾಮಾಂಕಿತಗೊಂಡಿರುವ ಶ್ರೀ ಚಂದ್ರಶೇಖರ ಪಾಟೀಲರ ಕಥೆ. ಬೆಕ್ಕಿಗೇಕೆ ಕಬ್ಬಿಣದ ಕೆಲಸ ಅನ್ನುವಂತೆ ಇವರಿಗೆ ಯಾಕೆ ಬೇಕಿತ್ತೋ ರಾಜಕೀಯ ಕೆಲಸ? ಸಾಹಿತ್ಯದಲ್ಲೇ ಆಗಬೇಕಾದ ನೂರಾರು ಕೆಲಸಗಳು ಇವೆ. ಕನ್ನಡದ ಕೆಲಸಗಳು ಮಾಡಿದಷ್ಟೂ ತೀರದು. ಇದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳದ ಚಂಪಾ ಏಕಾಏಕಿ ಯಡಿಯೂರಪ್ಪನವರ ಕೆಜೆಪಿಗೆ ಲಾಂಗ್ ಜಂಪ್ ಮಾಡಿರುವುದು ಆಶ್ಚರ್ಯಕ್ಕಿಂತ ಹೆಚ್ಚಾಗಿ ಕುಚೋದ್ಯವಾಗಿಯೇ ಕಾಣಿಸುತ್ತಿದೆ.

ಏಕೆಂದರೆ ಯಡಿಯೂರಪ್ಪ ಹಾಗೂ ಚಂಪಾ ಮೊದಲಿನಿಂದಲೂ ಜಿಗ್ರಿ ದೋಸ್ತ್‍ಗಳೇನಲ್ಲ. ಈ ಹಿಂದೆ ಹಾವು ಮುಂಗುಸಿಯಂತೆ ಕಿತ್ತಾಡಿಕೊಂಡವರು. ಶಿವಮೊಗ್ಗದ ಸಾಹಿತ್ಯ ಸಮ್ಮೇಳನದಲ್ಲಿ ತಾವು ಬರುವ ಮುಂಚೆಯೆ ಕಾರ್ಯಕ್ರಮ ಪ್ರಾರಂಭಿಸಿದರು ಎಂದು ಚಂಪಾ ಮೇಲೆ ಯಡ್ಡಿ ಎಗರಾಡಿದರೆ ಅದಕ್ಕೆ ಎದಿರೇಟಾಗಿ ಚಂಪಾ ಸಿಕ್ಕ ಸಿಕ್ಕ ವೇದಿಕೆಯಲ್ಲೆಲ್ಲಾ ಯಡ್ಡಿಯನ್ನು ಹಿಗ್ಗಾ ಮುಗ್ಗಾ ಎಳೆದಾಡಿದ್ದರು. ಇದಕ್ಕೆ ಮತ್ತೆ ಎದಿರೇಟು ನೀಡಿದ ಯಡ್ಡಿ ಚಂಪಾಗೆ ದಕ್ಕಿದ್ದ 'ಪಂಪ' ಪ್ರಶಸ್ತಿಗೆ ವರ್ಷಗಟ್ಟಲೆ ಅಡ್ಡಗಾಲು ಹಾಕಿ ಸೇಡು ತೀರಿಸಿಕೊಂಡಿದ್ದರು. ಹೀಗೆ ಏಟು ಎದಿರೇಟು ಕೊಟ್ಟುಕೊಳ್ಳುತ್ತಾ ವಿರೋಧಿಗಳಾಗಿದ್ದ ಚಂಪಾಗೆ ಈಗ ಯಡ್ಡಿ ಎಷ್ಟು ರೇಟು ಕೊಟ್ಟರೋ ತಿಳಿಯದು... ಕೆಜೆಪಿ ಕೋಟು ತೊಟ್ಟು ಬೀಗಲು ತಯಾರಾಗಿದ್ದಾರೆ.

ಹಾವು ಮುಂಗುಸಿಯಾಗಿದ್ದವರನ್ನು ಹೀಗೆ ಒಂದು ಮಾಡಿದ ಆ ಮಹಾನ್ ಶಕ್ತಿಯಾದರೂ ಯಾವುದು ? ಚಂಪಾ ಏನೋ 'ನಾನು ಮೊದಲಿನಿಂದಲೂ ಪ್ರಾದೇಶಿಕ ಪಕ್ಷದ ಪರ' ಎಂದು ರೈಲು ಬಿಡುತ್ತಿದ್ದಾರಾದರೂ ಮೇಲ್ನೋಟಕ್ಕೆ ಇದೊಂದು ಜಾತಿ ಸಂಕೋಲೆಯಾಗಿಯೆ ಕಾಣಿಸುತ್ತಿದೆ. ಏಕೆಂದರೆ ಪ್ರದೇಶಿಕ ಪಕ್ಷಗಳು ಈ ಮೊದಲೆ ಎಷ್ಟೋ ಬಂದು ಹೋಗಿವೆ, ಮತ್ತು ಈಗಲೂ ಇರುವಾಗ ಏಕಾಏಕಿ ಕೆಜೆಪಿಯೇ ಯಾಕೆ 'ಏಕ ಮಾತ್ರ ಪ್ರಾದೇಶಿಕ ಪಕ್ಷವಾಗಿ ಕಾಣಿಸಿತೋ?!'
ಇವರು ಜಾತಿ ನೋಡಿಯಾದರೂ ಹೋಗಿರಲಿ, ನೋಟು ನೋಡಿಯಾದರೂ ಹೋಗಿರಲಿ, ಆದರೆ ಸಾಹಿತಿಗಳಾದವರಿಗೆ ರಾಜಕೀಯ ಸರಿನಾ ? ಹಾಗಂತ ಸಾಹಿತಿಗಳೆಲ್ಲಾ ರಾಜಕೀಯ ಮಾಡದೇ ಸುಮ್ಮನಿದ್ದಾರೆ ಅಂತಲ್ಲ. ಒಳಗಿಂದೊಳಗೆ ರಾಜಕೀಯ ಪಿತೂರಿ ಮಾಡುವುದರಲ್ಲಿ ಕೆಲವು ಸಾಹಿತಿಗಳೇನೂ ಹಿಂದೆ ಬಿದ್ದಿಲ್ಲ. ಆದರೆ ಈ ರೀತಿ ನೇರ ರಾಜಕೀಯಕ್ಕಿಳಿಯುವುದು ಎಷ್ಟರ ಮಟ್ಟಿಗೆ ಸರಿ ? ಇಂತಹ ಸಾಹಿತಿಗಳಿಂದ ಶ್ರೇಷ್ಟ ಸಾಹಿತ್ಯ ನಿರೀಕ್ಷಿಸುವುದಾದರೂ ಹೇಗೆ ? ರಾಜಕೀಯವಾಗಿ ಒಂದು ಪಕ್ಷಕ್ಕೆ ಸೀಮಿತವಾದವರು ಸಾಮಾಜಿಕವಾಗಿ ನ್ಯಾಯಯುತ ಸಾಹಿತ್ಯ ರಚಿಸುತ್ತಾರೆ ಎನ್ನಲು ಹೇಗೆ ಸಾಧ್ಯ ? ಇಷ್ಟು ದಿನ ರಚಿಸಿದ ಇವರ ಸಾಹಿತ್ಯ ಎಷ್ಟು ಕಳಂಕ ರಹಿತವಾದದ್ದು ಇರಬಹುದು ? ಹಿರಿಯ ಸಾಹಿತಿಗಳೆ ಹೀಗೆ ಕುಲಗೆಟ್ಟ ರಾಜಕೀಯಕ್ಕೆ ಧುಮುಕುತ್ತಾರೆಂದ ಮೇಲೆ ನಾವು ಸುಖಾಸುಮ್ಮನೆ ರಾಜಕಾರಣಿಗಳನ್ನು ದೂರಿ ಏನು ಪ್ರಯೋಜನ ? 

ಸಾಹಿತಿಗಳಿಗೆ ಸ್ವಾಭಿಮಾನ ಹೆಚ್ಚು ಎಂದು ಕೇಳಿದ್ದೇವೆ. ಅದು ನಿಜವಾಗಿದ್ದರೆ ಇವರ ನಡತೆ ಹೀಗಿರಲು ಸಾಧ್ಯವಿತ್ತೆ ? ತಮ್ಮ ಸ್ವಾಭೀಮಾನವನ್ನು ಅಡವಿಟ್ಟು ಇನ್ನೊಬ್ಬ ಮುಖಂಡನ ಕೈ ಕೆಳಗೆ 'ಜೀ ಹುಜೂರ್' ಅನ್ನುವ ಅಗತ್ಯವಿತ್ತೇ ? ರಾಜಕೀಯವೆಂದ ಮೇಲೆ ನಾಯಕ ಏನು ಮಾಡಿದರೂ ಅದನ್ನು ಆ ಪಕ್ಷದ ಎಲ್ಲರೂ ಒಪ್ಪಿಕೊಳ್ಳಬೇಕು. ಇಲ್ಲವೆಂದರೆ ಆ ಪಕ್ಷ ಹದಗೆಟ್ಟು ಹೋಗುತ್ತದೆ. ಯಾರಾದರೂ ವಿರೋಧಿಸಿದರೆ ಅವರನ್ನು ಪಕ್ಷದಿಂದ ಹೊರ ಹಾಕುತ್ತಾರೆ. ಹಾಗಾದರೆ ಯಡಿಯೂರಪ್ಪ ಮುಂದೆ ಏನಾದರೂ ತಪ್ಪು ಮಾಡಿದರೆ ಚಂಪಾ ಏನು ಮಾಡುತ್ತಾರೆ ? ಯಡಿಯೂರಪ್ಪನವರ ಪಕ್ಷದ ಉಪ್ಪು ತಿಂದ ಕಾರಣಕ್ಕೆ ಅವರು ಮಾಡುವ ತಪ್ಪುಗಳನ್ನು ಸಹಿಸಿಕೊಂಡು ಸ್ವಾಭೀಮಾನ ಕಳೆದುಕೊಂಡು ಜೀವಂತ ಶವದಂತೆ ಬದುಕುತ್ತಾರಾ ? ಅಥವಾ ವೀರಾವೇಶದಿಂದ ವಿರೋಧಿಸಿ ಪಕ್ಷದಿಂದ ಉಚ್ಚಾಟನೆಗೊಂಡು ಮಾನ ಮರ್ಯಾದೆ ಕಳೆದುಕೊಳ್ಳುತ್ತಾರಾ ? ಅಥವಾ ಯಡಿಯೂರಪ್ಪ ತಪ್ಪೇ ಮಾಡದ ಪರಮ ಪ್ರಾಮಾಣಿಕ ಅನ್ನೋದು ಚಂಪಾರಿಗೆ (ಅದೂ ಇಷ್ಟು ದಿನ ವಿರೋಧಿಸಿಕೊಂಡಿದ್ದವರಿಗೆ) ಮನವರಿಕೆ ಆಗಿ ಹೋಯ್ತಾ ?
ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು.

* ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ.

* ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ.

* ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್.

* ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ.

* ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ.

* ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ.

* ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ.

* ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ.

* ಶಿಕ್ಷಣವೇ ಜೀವನದ ಬೆಳಕು - ಗೊರೂರು

* ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್.

* ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ.

* ವಿದ್ಯೆ ಗುರುಗಳ ಗುರು - ಭ್ರತೃ ಹರಿ.

* ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ಕೀರ್ತಿ ಕೈಗೂಡುತ್ತದೆ …

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು.

ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ.

ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆತ್ಮ…