ವಿಷಯಕ್ಕೆ ಹೋಗಿ

ಬಿಎಂಟಿಸಿ ಬಸ್‌ಗಳಿಗೆ ಜಿಪಿಎಸ್ ಅಳವಡಿಸಬೇಕುನೀವು ಬೆಂಗಳೂರಿನ ನಗರ ಸಾರಿಗೆಯಲ್ಲಿ ಓಡಾಡಿದ್ದರೆ ನರಕಕ್ಕೆ ಹೋದರೂ ಸುಖವಾಗಿ ಇರಬಲ್ಲಿರಿ. ಅದರಲ್ಲೂ ಬೆಳಗ್ಗೆ ಹಾಗೂ ಸಂಜೆಯ ಸಮಯವಂತೂ ಜನದಟ್ಟಣೆ ಹೇಳತೀರದು. ನೂರಾರು ಬಸ್‌ಗಳು ಇದ್ದರೂ ಸಹ ನಿಲ್ಲಲಿಕ್ಕೂ ಸಹ ಸ್ಥಳವಿಲ್ಲದಂತಹ ಸ್ಥಿತಿ. ಇದು ಒಂದೆಡೆಯಾದರೆ, ನಮಗೆ ಬೇಕಾದ ಬಸ್‌ ಯಾವ ಸಮಯಕ್ಕೆ ಬರುತ್ತದೆ, ಬರುತ್ತದೋ ಇಲ್ಲವೋ ಎಂಬ ಅನುಮಾನದಲ್ಲೇ ಕಾಯುತ್ತಿರಬೇಕು. ಬಂದರೆ ಹಡೆಯಲು ತಯಾರಾದ ತಾಯಿಯಂತೆ ಹೊಟ್ಟೆ ತುಂಬಿಸಿಕೊಂಡ ಬಸ್‌ಗಳೇ ಬರುತ್ತವೆ. ಅದರಲ್ಲೇ ಜನ ನುಗ್ಗಿ ಹತ್ತಿಕೊಂಡು ಹೋದರೆ ಅದರ ಹಿಂದೆ ಖಾಲಿ ಬಸ್‌ಗಳು ಬರುತ್ತವೆ. 

ಇದನ್ನು ಸರಿಪಡಿಸಲು ಒಂದು ಉಪಾಯವಿದೆ. ನಗರ ಸಾರಿಗೆಯ ಎಲ್ಲಾ ಬಸ್‌ಗಳಿಗೂ ಜಿಪಿಎಸ್ ಅಳವಡಿಸಿ ಅದಕ್ಕಾಗಿ ಒಂದು ಮೊಬೈಲ್ ಆಪ್‌ ಅನ್ನು ಸಿದ್ದಪಡಿಸಿ ಪ್ರಯಾಣಿಕರಿಗೆ ಒದಗಿಸಬೇಕು. ಆ ಆಪ್‌ ಅನ್ನು ಮೊಬೈಲ್‌ನಲ್ಲಿ ಬಳಸುವ ಪ್ರಯಾಣಿಕರು ತಮಗೆ ಬೇಕಾದ ಬಸ್‌ ಮಾರ್ಗ ಸಂಖ್ಯೆಯನ್ನು ಹಾಕಿ ಹುಡುಕಿದರೆ ಆ ಮಾರ್ಗದಲ್ಲಿ ಎಷ್ಟು ಬಸ್‌ಗಳು ಎಲ್ಲೆಲ್ಲಿ ಬರುತ್ತವೆ ಎಂಬುದು ತಿಳಿಯಬೇಕು. ಈ ರೀತಿ ಅನುಕೂಲ ಕಲ್ಪಿಸಿದರೆ ಒಂದು ಬಸ್‌ ಬಂದಾಗ ಎಲ್ಲರೂ ಅದರಲ್ಲೇ ನುಗ್ಗಿ ಹತ್ತುವ ಬದಲಾಗಿ ಹಿಂದೆ ಬರುತ್ತಿರುವ ಬಸ್‌ಗಾಗಿಯೂ ಸ್ವಲ್ಪ ಜನ ಉಳಿಯಬಹುದು. ಅಲ್ಲದೇ ಬಸ್‌ಗಳ ಮಾಹಿತಿ ಮೊಬೈಲ್‌ನಲ್ಲಿಯೇ ದೊರೆಯುವುದರಿಂದ ಸಮಯದ ಉಳಿತಾಯವೂ ಆಗುತ್ತದೆ. ಅನಗತ್ಯವಾಗಿ ಖಾಲಿ ಬಸ್‌ಗಳು ಓಡಾಡುವುದೂ ತಪ್ಪುತ್ತದೆ.

ಈ ವಿಷಯವನ್ನು ನಂದನ್ ನಿಲೇಕಣಿಯವರ 'ಬೆಂಗಳೂರಿಗಾಗಿ ಕಲ್ಪನೆಗಳು' ಎಂಬ ವಿಭಾಗಕ್ಕೆ ತಿಳಿಸಿದ್ದೇನೆ... ನೋಡೋಣ, ಕಾರ್ಯಗತವಾದರೂ ಆಗಬಹುದು. ನಿಮ್ಮದೂ ಏನಾದರೂ ಕಲ್ಪನೆಗಳಿದ್ದಲ್ಲಿ ೦೮೦-೬೭೨೬೪೬೪೫ ಸಂಖ್ಯೆಗೆ ಒಂದು ತಪ್ಪಿದ ಕರೆಯನ್ನು ಕೊಡುವುದರ ಮೂಲಕ ತಿಳಿಸಿ ಪುಣ್ಯ ಕಟ್ಟಿಕೊಳ್ಳಿ.
ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು.

* ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ.

* ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ.

* ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್.

* ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ.

* ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ.

* ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ.

* ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ.

* ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ.

* ಶಿಕ್ಷಣವೇ ಜೀವನದ ಬೆಳಕು - ಗೊರೂರು

* ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್.

* ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ.

* ವಿದ್ಯೆ ಗುರುಗಳ ಗುರು - ಭ್ರತೃ ಹರಿ.

* ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ಕೀರ್ತಿ ಕೈಗೂಡುತ್ತದೆ …

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು.

ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ.

ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆತ್ಮ…