ವಿಷಯಕ್ಕೆ ಹೋಗಿ

ದುನಿಯಾ ವಿಜಿಯ ಸಾಮಾಜಿಕ ಬದುಕು !


​ನೀವು ಎಷ್ಟೋ ನಟ ನಟಿಯರ ಫೇಸ್‌ಬುಕ್ ಪ್ರೊಫೈಲ್ ಪುಟ ನೋಡಿರಬಹುದು. ಅವರೊಂದಿಗೆ ಅಲ್ಲಿ ಗೆಳೆತನವನ್ನೂ ಸಾಧಿಸಿರಬಹುದು. ಆದರೆ ಅವರು ಹಂಚಿಕೊಳ್ಳುವ ವಿಷಯ, ಚಿತ್ರಗಳಾದರೂ ಎಂಥವು ? ನಟರಾದರೆ ತಾನು ಇತ್ತೀಚಿಗೆ ನಟಿಸಿರುವ, ನಟಿಸುತ್ತಿರುವ ಚಿತ್ರಗಳಲ್ಲಿ ತಾನು ಮಾಡಿದ ಪಾತ್ರಗಳ ಚಿತ್ರ, ನಟಿಯರನ್ನು ತಬ್ಬಿಕೊಂಡಿರುವ ಚಿತ್ರ, ನೃತ್ಯ, ಸಾಹಸ ಮಾಡುತ್ತಿರುವ ಚಿತ್ರಗಳನ್ನು  ಹಂಚಿಕೊಳ್ಳುತ್ತಾರೆ. ಅದೇ ನಟಿಯರಾದರೆ ಅವರೂ ಕೂಡಾ ಇತ್ತೀಚಿನ ತಮ್ಮ ಚಿತ್ಗಳ ಬಗ್ಗೆ, ದೊಡ್ಡ ದೊಡ್ಡ ನಟರ ಜೊತೆ ಅವಕಾಶ ಸಿಕ್ಕಿರುವುದರ ಬಗ್ಗೆ, ಅಲ್ಲಿ ಇಲ್ಲಿ ಸುತ್ತಾಡಿ ಸಂತೋಷಗೊಂಡಿದುದರ ಬಗ್ಗೆ ಹಾಗೂ ಯಥಾ ಪ್ರಕಾರ ತಮ್ಮ ವಿವಿಧ ಭಂಗಿಗಳ ಚಿತ್ರಗಳಲ್ಲಿ ಎದೆ, ಸೊಂಟ, ಕಾಲುಗಳನನ್‌ಉ ತೋರಿಸುತ್ತಾ ದಿನನಿತ್ಯ ಪ್ರಕಟಣೆಗಳನ್ನು ಹಂಚಿಕೊಳ್ಳುತ್ತಾರಷ್ಟೇ ? ಇದಕ್ಕೆ ಹೊರತಾದ ನಟ-ನಟಿಯರು ತೀರಾ ಕಡಿಮೆ ಎಂದೇ ಹೇಳಬೇಕು.

ಆದರೆ ನಾನು ಕಂಡ ಸಿನೆಮಾ ನಟ ನಟಿಯರ ಫೇಸ್‌ಬುಕ್ ಪ್ರೊಫೈಲ್‌ಗಳಲ್ಲಿ ದುನಿಯಾ ವಿಜಿ ಅವರ ಪ್ರೊಫೈಲ್ ಮಾತ್ರ ವಿಭಿನ್ನ! ಇವರ ಪ್ರೊಫೈಲ್‌ನಲ್ಲಿ ಚಿತ್ರ ಜೀವನಕ್ಕಿಂತಲೂ ನಿಜ ಜೀವನದ ವಿವಿಧ ಮುಳ್ಳಿನ ಮಗ್ಗುಲುಗಳನ್ನು ತೆರೆದಿಡುತ್ತಿದ್ದಾರೆ. ಇವರ ಪ್ರೊಫೈಲ್ ವೀಕ್ಷಿಸಿದರೆ ಒಬ್ಬ ನಟನ ಪ್ರೊಫೈಲ್ ನೋಡುತ್ತಿರುವುದರ ಬದಲಾಗಿ ಒಬ್ಬ ಸಮಾಜ ಸೇವಕನ ಪ್ರೊಫೈಲ್ ನೋಡುತ್ತಿರುವಂತೆ ಭಾಸವಾಗುತ್ತದೆ. ಚಿತ್ರರಂಗದಲ್ಲಿನ ಅನೇಕರ ಕಷ್ಟ ಕಾರ್ಪಣ್ಯಗಳಿಗೆ ಮಿಡಿಯುವ ಇವರು ಅಲ್ಲಿನವರ ಅನೇಕ ನೋವುಗಳನ್ನೂ ತಮ್ಮ ಪುಟದಲ್ಲಿ ಅನಾವರಣ ಮಾಡುತ್ತಾರೆ. ಹಾಗೆಯೇ ತಮ್ಮ ಕೈಲಾದ ಸಹಾಯವನ್ನೂ ಮಾಡುತ್ತಾರೆ. ಇದೆಲ್ಲಕ್ಕಿಂತ ಹೆಚ್ಚಾಗಿ ಅಲ್ಲಿ ಪ್ರತಿಕ್ರಿಯೆ ಹಾಕುವವರಿಗೆ ತಮ್ಮ ಪ್ರತಿಕ್ರಿಯೆಯನ್ನೂ ನೀಡುತ್ತಾರೆ. ಒಬ್ಬ ನಟನಲ್ಲಿ ಇಂತಹ ಸರಳತೆ ಕಾಣುವುದು ತುಂಬಾ ವಿರಳ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು.

* ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ.

* ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ.

* ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್.

* ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ.

* ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ.

* ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ.

* ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ.

* ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ.

* ಶಿಕ್ಷಣವೇ ಜೀವನದ ಬೆಳಕು - ಗೊರೂರು

* ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್.

* ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ.

* ವಿದ್ಯೆ ಗುರುಗಳ ಗುರು - ಭ್ರತೃ ಹರಿ.

* ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ಕೀರ್ತಿ ಕೈಗೂಡುತ್ತದೆ …

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು.

ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ.

ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆತ್ಮ…